ನಟಿ ರಾಗಿಣಿ ಮತ್ತೆ ಐದು ದಿನ ಪೊಲೀಸ್ ಕಸ್ಟಡಿಗೆ….

ಬೆಂಗಳೂರು,ಸೆಪ್ಟಂಬರ್,7,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯವರನ್ನು 5 ದಿನಗಳ ಕಾಲ ಮತ್ತೆ  ಸಿಸಿಬಿ ಕಸ್ಟಡಿಗೆ ವಹಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.jk-logo-justkannada-logo

ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನ 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು  ಕೇಳಿದ್ದರು.  ನಟಿ ರಾಗಿಣಿಗೆ ಡ್ರಗ್ಸ್ ಜಾಲದ ನಂಟಿಗೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಸಿಸಿಬಿ ತನಿಖೆಗೆ ಸರಿಯಾಗಿ ಸಹಕರಿಸಿಲ್ಲ. ಹೀಗಾಗಿ ಅವರನ್ನು ಇನ್ನಷ್ಟು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಸಿಬಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ  ಮಾಡಿದ್ದರು.actress-ragini-again-police-custody-five-days

ಈ ಸಂಬಂಧ ಇದೀಗ  ನಟಿ ರಾಗಿಣಿ ಅವರನ್ನ 5 ದಿನಗಳ ಕಾಲ ಮತ್ತೆ  ಸಿಸಿಬಿ ಕಸ್ಟಡಿಗೆ ನೀಡಿ 1ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶರಾದ  ಜಗದೀಶ್ ಆದೇಶ ಹೊರಡಿಸಿದ್ದಾರೆ.

 

Key words: Actress -Ragini –again– police-custody – five days.