ಅಜಾಗರೂಕತೆ-ದುರಹಂಕಾರದ ಮೋದಿಯಿಂದ ಜನ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ: ನಟಿ ರಮ್ಯಾ

ಬೆಂಗಳೂರು, ಏಪ್ರಿಲ್ 29, 2021 (www.justkannada.in): ಕೋವಿಡ್-19 ಎರಡನೇ ಅಲೆ ನಿಯಂತ್ರಿಸುವಲ್ಲಿ ಸರ್ಕಾರ ಎಡವಿದೆ ಎಂದು ರಮ್ಯಾ ಆರೋಪಿಸಿದ್ದಾರೆ.

ಇನ್ ಸ್ಟಾಗ್ರಾಮ್ ನಲ್ಲಿ ಈ ಕುರಿತು ಬರೆದುಕೊಂಡಿರುವ ರಮ್ಯಾ ಕೋವಿಡ್‌ನಿಂದ ಸಂಭವಿಸುತ್ತಿರುವ ಸಾವುಗಳು ಅನಗತ್ಯ. ಇದನ್ನು ತಡೆಯಬಹುದಿತ್ತು. ಜನರು ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಜಾಗರೂಕತೆ ಮತ್ತು ದುರಹಂಕಾರದ ಮೋದಿಯಿಂದಾಗಿ ಅನೇಕರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ.

ಈ ಸರ್ಕಾರಕ್ಕೆ ಕೇಳಿಸಿಕೊಳ್ಳುವ ವ್ಯವಧಾನ ಇಲ್ಲ. ಅಧಿಕಾರಕ್ಕಾಗಿ ದುರಾಸೆ ಪಡುತ್ತಿರುವ ಈ ಸರ್ಕಾರಕ್ಕೆ ಯಾವುದೇ ಸಹಾನುಭೂತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.