Wednesday, September 16, 2026

BDA Apartments

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಜಾಮೀನು ಅರ್ಜಿ ವಜಾ BDA JK_Adv BDA Adv
Home Cinema ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಜಾಮೀನು ಅರ್ಜಿ ವಜಾ

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು,ಮಾರ್ಚ್,14,2025 (www.justkannada.in): ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ.

ಅಕ್ರಮ ಚಿನ್ನ ಸಾಗಣೆಯಲ್ಲಿ ಮಾರ್ಚ್ 4ರಂದು ಬಂಧನವಾಗಿರುವ ನಟಿ ರನ್ಯಾರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಟಿ ರನ್ಯಾರಾವ್ ಗೆ ಜೈಲೇಗತಿಯಾಗಿದೆ. ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು ಪ್ರಕರಣದ 2ನೇ ಆರೋಪಿ ತರುಣ್ ರಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್ ಐಗೆ ನ್ಯಾಯಾಲಯ ಸೂಚನೆ ನೀಡಿದೆ.

Key words: Gold smuggling case,  Actress, Ranya Rao’, bail plea, dismissed