ಬಾಲಿವುಡ್ ಬಿಗ್ ಬಿ ಚಿತ್ರದಲ್ಲಿ ಕಿರಿಕ್ ಬೆಡಗಿ ರಶ್ಮಿಕಾ

ಬೆಂಗಳೂರು, ಏಪ್ರಿಲ್ 02, 2020 (www.justkannada.in): 

ಅಮಿತಾಭ್ ಬಚ್ಚನ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಗುಡ್ ಬೈ’ ಚಿತ್ರದ ಮುಹೂರ್ತ ಇಂದು ಮುಂಬೈನಲ್ಲಿ ನಡೆದಿದೆ.

ವಿಶೇಷ ಎಂದರೆ ಈ ಚಿತ್ರದಲ್ಲಿ ನಟಿಸುವ ಅವಕಾಶ ಪಡೆದಿರುವುದು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ.

‘ಗುಡ್ ಬೈ’ ಸಿನಿಮಾದ ಪೂಜೆ ಕಾರ್ಯಕ್ರಮದ ಪೋಟೋಗಳನ್ನು ಖ್ಯಾತ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುಂಚೆ ಸಿದ್ಧಾರ್ಥ್ ಮಲ್ಹೋತ್ರ ನಟಿಸುತ್ತಿರುವ ‘ಮಿಷನ್ ಮಜ್ನು’ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ಆಯ್ಕೆಯಾಗಿದ್ದರು.

ಇದು ರಶ್ಮಿಕಾಗೆ ಮೊದಲ ಹಿಂದಿ ಸಿನಿಮಾ. ಈ ಚಿತ್ರದ ಚಿತ್ರೀಕರಣ ಅದಾಗಲೇ ಆರಂಭವಾಗಿದ್ದು, ಮೊದಲ ಹಂತದ ಶೂಟಿಂಗ್‌ನಲ್ಲಿ ನಟಿ ಭಾಗವಹಿಸಿದ್ದರು.