ನಟಿ ಸಂಜನಾ ಐದು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ…

ಬೆಂಗಳೂರು,ಸೆಪ್ಟಂಬರ್,8,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ 8ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಇಂದು ಬೆಳಗ್ಗೆ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ ಇಡೀ ಮನೆಯನ್ನು ಪರಿಶೀಲಿಸಿ ನಟಿ ಸಂಜನಾರನ್ನ ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿದ  ನಂತರ ನಟಿ ಸಂಜನಾರನ್ನ ಸಿಸಿಬಿ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.Actress -Sanjana -custody - CCB -police - five days.

ಇದೀಗ ಕೋರ್ಟ್ ನಟಿ ಸಂಜನಾ ಅವರನ್ನ 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ.

Key words: Actress -Sanjana -custody – CCB -police – five days.