ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನ ನಟಿಯರು ಭೇಟಿಯಾಗಿ ಸಾಹಸಸಿಂಹ ದಿ. ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.
ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾದ ಹಿರಿಯ ನಟಿಯರಾದ ಜಯಮಾಲ, ಶೃತಿ, ಮಾಳವಿಕ ಅವಿನಾಶ್ ಅವರು, ಡಾ. ವಿಷ್ಣುವರ್ದನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಹಾಗೂ ಮಲ್ಲೇಶ್ವರಂ ರಸ್ತೆಗೆ ಹಿರಿಯ ನಟಿ ಬಿ. ಸರೋಜಾದೇವಿ ಅವರ ಹೆಸರು ಇಡುವಂತೆ ಮನವಿ ಸಲ್ಲಿಸಿದರು.
ಇತ್ತೀಚೆಗಷ್ಟೆ ಹಿರಿಯ ನಟಿ ಭಾರತಿ ವಿಷ್ಣುವರ್ದನ್ ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣು ಸ್ಮಾರಕಕ್ಕೆ ಜಾಗ ಮೀಸಲಿಡುವಂತೆ ಮನವಿ ಸಲ್ಲಿಸಿದ್ದರು.
Key words: Actresses, meet, DCM, DK Shivakumar, Karnataka Ratna, Dr. Vishnuvardhan