ಬೆಂಗಳೂರು, ಸೆಪ್ಟೆಂಬರ್, 06,2020(www.justkannada.in) : ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ಸ್ವತಃ ಅವರೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಅವರ ವೈಯಕ್ತಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ರಾಜ್ಯ ಬಿಜೆಪಿಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಸ್ಯಾಂಡಲ್ ವುಂಡ್ ಡ್ರಗ್ಸ್ ಮಾಫಿಯಾ ಸಂಬಂಧಪಟ್ಟಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನಟಿ ರಾಗಿಣಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿರುವುದು ಪಕ್ಷಕ್ಕ ಮುಜುಗರವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯು ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಪಕ್ಷಕ್ಕೂ ನಟಿ ರಾಗಿಣಿಗೂ ಸಂಬಂಧವಿಲ್ಲ. ಅವರಿಗೆ ಚುನಾವಣಾ ಕಾರ್ಯಭಾರ ವಹಿಸಿರಲಿಲ್ಲ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಅವರ ವೈಯಕ್ತಿಕ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
key words : Actress-Ragini-BJP-member-State-BJP’s-media-announcement- clear






