ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ 

ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) :  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ.

jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗೆ ಜಾಮೀನು ನೀಡುವಂತೆ ಸಂಜನಾ ಗಲ್ರಾನಿ ಪರ ವಕೀಲರು ನಿನ್ನೆ  ಅರ್ಜಿ ಸಲ್ಲಿಸಿದರು.

Actress-Sanjana Galrani-bail-Postponement-application-hearing

ಇದಕ್ಕೆ ಸಂಬಂಧಿಸಿದಂತೆ ವಿಶೇಷ ಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿದ್ದು, ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನು ಎನ್ ಡಿಪಿಎಸ್ ವಿಶೇಷ ಕೋರ್ಟ್ ನಾಳೆಗೆ ಮುಂದೂಡಿದೆ. ನಾಳೆ ಉಳಿದ ಆರೋಪಿಗಳ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

key words : Actress-Sanjana Galrani-bail-Postponement-application-hearing