ಜಿ -20 ಸದಸ್ಯ ರಾಷ್ಟ್ರಗಳ ಪಟ್ಟಿಗೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ: ಪ್ರಧಾನಿ ಮೋದಿ ಘೋಷಣೆ.

ನವದೆಹಲಿ,ಸೆಪ್ಟಂಬರ್,9,2023(www.justkannada.in):  ನವದೆಹಲಿಯ ಪ್ರಗತಿ ಮೈದಾನ್ ಅವರಣದ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಜಿ 20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆಗೊಳಿಸಲಾಗಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದರು. ಈ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್​ ಒಕ್ಕೂಟ ಸೇರ್ಪಡೆಯಾಗಿದೆ.

ಬಳಿಕ ಮಾತು ಮುಂದುವರೆಸಿದ ಪ್ರಧಾನಿ ಮೋದಿ,  ಕೊರೊನಾ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಸಮಸ್ಯೆ ಅನುಭವಿಸುವಂತಾಗಿದೆ. ಕೋವಿಡ್ ನಿಂದ ಅನೇಕ ದೇಶಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈಗಷ್ಟೆ ಎಲ್ಲಾ ದೇಶಗಳು ಆರ್ಥಿಕವಾಗಿ ಚೇತರಿಕೆ ಕಾಣುತ್ತಿವೆ ಎಂದರು.

ಸಬ್ ಕಾ ಸಾತ್, ಸಬ್ ಕಾ ವಿಕಾಸ್​ಗೆ ಮಂತ್ರವನ್ನು ಪಠಿಸಬೇಕಿದೆ ಭಯೋತ್ಪಾದನೆ, ಸೈಬರ್ ದಾಳಿ ಭೀತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚಿಂತಿಸಬೇಕಿದೆ  ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

Key words: Addition – African Union – list of G-20 member- PM Modi- announcement.