ನವದೆಹಲಿ,ಮಾರ್ಚ್,21,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ರೆಸ್ಟೋರೆಂಟ್ ಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.
ಹೋಟೆಲ್ ಗಳಿಗೆ ಶೇ 20 ರಷ್ಟು ಹೆಚ್ಚುವರಿ ಎಲ್ ಪಿಜಿ ಸಿಲಿಂಡರ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಗಳಿಗೆ ಹೆಚ್ಚುವರಿ ಶೇ 20ರಷ್ಟು ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಸೋಮವಾರದಿಂದ ಎಲ್ಲಾ ರಾಜ್ಯಗಳಿಗೆ ಸಿಲಿಂಡರ್ ಸಪ್ಲೈ ಆಗಲಿದೆ ಎನ್ನಲಾಗಿದೆ.
ಇರಾನ್ ವಿರುದ್ದ ಇಸ್ರೇಲ್, ಅಮೇರಿಕಾ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ವಾಣಿಜ್ಯ ಬಳಕೆಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಸಿಲಿಂಡರ್ ಗಳಿಲ್ಲದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದರು.
Key words: hotels, supply, additional cylinders, Central Government







