Wednesday, September 23, 2026

BDA Apartments

Home Front Page ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ: ಸ್ಪಷ್ಟನೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ: ಸ್ಪಷ್ಟನೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ಕಲ್ಬುರ್ಗಿ,ಜನವರಿ,9,2024(www.justkannada.in): ರಾಜ್ಯದಲ್ಲಿ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೂವರು ಡಿಸಿಎಂ ವಿಚಾರ ಹೈಕಮಾಂಡ್ ಮುಂದೆ ಇಲ್ಲ. ಹೆಚ್ಚುವರಿ ಡಿಸಿಎಂ ವಿಚಾರವಾಗಿ ನಮ್ಮ ಮುಂದೆ ಪ್ರಸ್ತಾವನೆ ಇಲ್ಲ. ಹೆಚ್ಚುವರಿ ಡಿಸಿಎಂ ವಿಚಾರ ಊಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು . ಸರ್ಕಾರದ ಕಡೆ , ಸಮಸ್ಯೆಗಳ ಕಡೆ, ಗ್ಯಾರಂಟಿಗಳನ್ನ ಅನುಷ್ಟಾನಕ್ಕೆ ತರುವ ಕಡೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವವರೆಗೂ ಇಂತಹ ವಿಚಾರಕ್ಕೆ ಅವಕಾಶ ಕೊಡಬಾರದು ಎಂದರು.ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ: ಸ್ಪಷ್ಟನೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ AICC President Mallikarjuna Khar given grand welcome by KPCC, Grand convention in Bengaluru A...

ಇನ್ನು ಲೋಕಸಭೆ ಅಭ್ಯರ್ಥಿಗಳ  ಆಯ್ಕೆ ಸಂಬಂಧ ನಾಳೆ ಸಭೆ ನಡೆಯಲಿದೆ.  ನಾಳೆ ಕರ್ನಾಟಕ  ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಸಭೆ ನಡೆಯಲಿದ್ದು,  ಯಾರನ್ನ ಕಣಕ್ಕಿಳಿಸಬೇಕು ಎಂದು ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Key words: Additional DCM- issue – state-AICC president -Mallikarjuna Kharge -clarified