ಮೈಸೂರು ವಿವಿ ಜೊತೆಗೆ ಐಬಿಎಂ ಹಾಗೂ ಗೂಗಲ್ ಒಡಂಬಡಿಕೆ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ 

ಮೈಸೂರು,ಅಕ್ಟೋಬರ್,22,2020(www.justkannada.in) :  ಮೈಸೂರು ವಿಶ್ವವಿದ್ಯಾನಿಲಯ ಕಂಪ್ಯೂಟರ್ ಸೈನ್ಸ್ ವಿಭಾಗದ ಜೊತೆಗೆ ದೈತ್ಯ ಐಟಿ ಸಂಸ್ಥೆಗಳಾದ ಐಬಿಎಂ ಹಾಗೂ ಗೂಗಲ್ ಒಡಂಬಡಿಕೆಗೆ ಮುಂದಾಗಿದೆ. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಈ ಸಂಸ್ಥೆಗಳು ಕಾರ್ಯೋನ್ಮುಖವಾಗಲಿವೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು. jk-logo-justkannada-logo

ಆಹಾರ ವಿಜ್ಞಾನ ಮತ್ತು ಪೌಷ್ಠಿಕಾಂಶ ಅಧ್ಯಯನ ವಿಭಾಗದ ವತಿಯಿಂದ ಗುರುವಾರ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ‘’ಆಹಾರ ಸುರಕ್ಷತೆ ಮತ್ತು ಪೋಷಣೆಗಾಗಿ ಸುಸ್ಥಿರ ತಂತ್ರಗಳು’’ ವಿಷಯ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೈಸೂರು ವಿವಿ 100 ನೇ ಘಟಿಕೋತ್ಸವ ಕಾರ್ಯಕ್ರಮದ ಪ್ರಧಾನ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ವಿವಿಯ ಎಲ್ಲಾ ವಿಭಾಗಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ವಿಭಾಗಕ್ಕೆ ಸಂಬಂಧಿಸಿದ ಉದ್ಯಮಗಳೊಂದಿಗೆ ಸಂಪರ್ಕ ಸಾಧಿಸುವುದು ಅಗತ್ಯವಾಗಿದೆ ಎಂದು ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.

 addition,Mysore Vivi,IBM,Google,Treaty,Chancellor,Prof. G. Hemant Kumar

ಉದ್ಯೋಗ ಸೇರಿದಂತೆ ಹಲವು ರೀತಿಯಲ್ಲಿ ಉಪಯೋಗ

ವಿಭಾಗಕ್ಕೆ ಸಂಬಂಧಿಸಿದ ಉದ್ಯಮಗಳ ಸಂಪರ್ಕದಿಂದ ಉದ್ಯೋಗ ಸೇರಿದಂತೆ ಕೌಶಲ್ಯಾಭಿವೃದ್ಧಿಗೆ ಉಪಯೋಗವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿಭಾಗಗಳು ತಮ್ಮ ವಿಭಾಗಕ್ಕೆ ಸಂಬಂಧಿಸಿದ ಉದ್ಯಮಗಳ ಸಂಪರ್ಕ ಸಾಧಿಸಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಅಭಿವೃದ್ಧಿಗೆ ವಿವಿಯ ಬೋಧಕ ವರ್ಗ, ವಿದ್ಯಾರ್ಥಿಗಳ ಸಹಕಾರ ಪ್ರಮುಖ

ರಾಷ್ಟ್ರೀಯ ಶಿಕ್ಷಣ ನೀತಿಯ ಅಭಿವೃದ್ಧಿಗಾಗಿ ವಿವಿಯ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳ ಸಹಕಾರ ಪ್ರಮುಖವಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ. ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವು ಹೆಚ್ಚಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಆಹಾರ ವಿಜ್ಞಾನ ಮತ್ತು ಪೌಷ್ಠಿಕಾಂಶ ಅಧ್ಯಯನ ವಿಭಾಗ 50 ವರ್ಷ ಪೂರ್ಣ

ಈ ವಿಭಾಗವು 50 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಸಂತೋಷದ ವಿಷಯ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಲ್ಲಿ, ವಿಶೇಷವಾಗಿ ಆಹಾರ ಮತ್ತು ಕೃಷಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಮಾವೇಶ ಸೂಕ್ತ ಕಾರ್ಯಕ್ರಮವಾಗಿದೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು. ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ, ಸಂತೋಷದಿಂದ ಉದ್ಘಾಟಿಸುವುದಾಗಿ ತಿಳಿಸಿದರು.

ಸಮಾವೇಶದ ವೆಬಿನಾರ್ ನಲ್ಲಿ 400ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಈ ಸಂದರ್ಭ ವಿಭಾಗದ ಮುಖ್ಯಸ್ಥೆ ಡಾ.ಅಸ್ನ ಊರಜ್, ಮಾನವ ಅಭಿವೃದ್ಧಿ ವಿಭಾಗದ ಪ್ರಾಧ್ಯಾಪಕಿ ಡಾ.ಎಂ.ಕೋಮಲಾ, ಡಾ.ಸಂಧ್ಯಾ ಸಿಂಗ್ ಇತರರು ಹಾಜರಿದ್ದರು.

key words : addition-Mysore Vivi-IBM-Google-Treaty-Chancellor-Prof. G. Hemant Kumar