Sunday, September 20, 2026

BDA Apartments

ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕರಾಗಿ ಅಧಿರ್ ರಂಜನ್ ಚೌಧರಿ ಆಯ್ಕೆ… BDA JK_Adv BDA Adv
Home Front Page ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕರಾಗಿ ಅಧಿರ್ ರಂಜನ್ ಚೌಧರಿ ಆಯ್ಕೆ…

ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕರಾಗಿ ಅಧಿರ್ ರಂಜನ್ ಚೌಧರಿ ಆಯ್ಕೆ…

ನವದೆಹಲಿ.ಜೂ,18,2019(www.justkannada.in): 17ನೇ ಲೋಕಸಭೆಯ ಕಾಂಗ್ರೆಸ್  ಸಂಸದೀಯ ನಾಯಕರಾಗಿ  ಪಶ್ಚಿಮ ಬಂಗಾಳದ ಬೆಹ್ರಾಂಪೊರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಅಧಿರ್ ರಂಜನ್ ಚೌಧರಿ ಅವರನ್ನ ಆಯ್ಕೆ ಮಾಡಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸದೀಯ ನಾಯಕರಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಅಧಿರ್ ರಂಜನ್ ಚೌಧರಿ ಅವರನ್ನು 17ನೇ ಲೋಕಸಭೆಯ ಸಂಸದೀಯ ನಾಯಕನನ್ನಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿರ್ ರಂಜನ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ.   ಚೌಧಿರಿ ಅವರು ಪಶ್ಚಿಮ ಬಂಗಾಳದ ಬೆಹ್ರಾಂಪೊರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, 1999ರಿಂದ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 16ನೇ ಲೋಸಭೆಯಲ್ಲಿ ಮಲ್ಲಿಕಾರ್ಜನ್ ಖರ್ಗೆ ಅವರು ಕಾಂಗ್ರೆಸ್ ಸಂಸದೀಯ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.

Key words: Adhir Ranjan Chowdhury- elected – Lok Sabha -Congress