ವಿಧಾನ ಪರಿಷತ್ ನಲ್ಲಿ ಮುಂದುವರೆದ ಧರಣಿ: ಕಲಾಪ ಸೋಮವಾರಕ್ಕೆ ಮುಂದೂಡಿಕೆ..

ಬೆಂಗಳೂರು,ಜು,19,2019(www.justkannada.in):  ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಧರಣಿ ನಡೆಸಿದ ಪರಿಣಾಮ ವಿಧಾನ ಪರಿಷತ್ ಕಲಾಪವನ್ನು ಸೋಮವಾರ ಮಧ್ಯಾಹ್ನ 12.30ಕ್ಕೆ ಮುಂದೂಡಿಕೆ ಮಾಡಲಾಯಿತು.

ಮಧ್ಯಾಹ್ನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಬಾವಿಯಲ್ಲಿ ಧರಣಿ ಮುಂದುವರೆಸಿದರು. ಸರ್ಕಾರದ ವಿರುದ್ಧ ಭಿತ್ತಿ ಪತ್ರ ಪ್ರದರ್ಶಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಕೂಡ ಭಿತ್ತಿಪತ್ರ ಪ್ರದರ್ಶನ ಮಾಡಿದರು. ಅತೃಪ್ತ ಶಾಸಕರ ಜೊತೆ ಬಿಜೆಪಿ ನಾಯಕರು ಇದ್ದ ಫೋಟೋ ಪ್ರದರ್ಶನ ಮಾಡಿದರು.

ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ಭಿತ್ತಿ ಪತ್ರ ಪ್ರದರ್ಶನದ ನಡುವೆಯೇ ಪ್ರಶ್ನೋತ್ತರ ಕಲಾಪ ಆರಂಭಕ್ಕೆ ಸಭಾ ನಾಯಕಿ ಜಯಮಾಲಾ ಮುಂದಾದರು. ಚುಕ್ಕೆ‌ಗುರುತಿನ ಮತ್ತು ಚುಕ್ಕೆ ಗುರುತು ಇಲ್ಲದ ಪ್ರಶ್ನೆಗಳನ್ನು ಸದನದಲ್ಲಿ ಮಂಡಿಸಿದರು.

ಸದ‌ದಲ್ಲಿ ಗದ್ದಲ ಮುಂದುವರೆದು ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಳ್ಳಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಪಸಭಾಪತಿಗಳು ಕಲಾಪವನ್ನು ಸೋಮವಾರ ಮಧ್ಯಾಹ್ನ 12.30 ಕ್ಕೆ ಮುಂದೂಡಿಕೆ ಮಾಡಿದರು.

Key words: Adjournment – legislative council-cm- Resignation