Sunday, September 20, 2026

BDA Apartments

ಮೈಸೂರು ವಿವಿ ಘಟಕ ಕಾಲೇಜುಗಳಲ್ಲಿ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ: ಅರ...
Home Front Page ಮೈಸೂರು ವಿವಿ ಘಟಕ ಕಾಲೇಜುಗಳಲ್ಲಿ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ: ಅರ್ಜಿ ಸಲ್ಲಿಕೆಗೆ ಅವಕಾಶ.

ಮೈಸೂರು ವಿವಿ ಘಟಕ ಕಾಲೇಜುಗಳಲ್ಲಿ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ: ಅರ್ಜಿ ಸಲ್ಲಿಕೆಗೆ ಅವಕಾಶ.

ಮೈಸೂರು,ಅಕ್ಟೋಬರ್,13,2021(www.justkannada.in): ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾಗಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು, ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತಾಲ್ಲೂಕಿನ ತೆರಕಣಾಂಬಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದೆ.

ಪ್ರಸ್ತುತ 2021-22ನೇ ಶೈಕ್ಷಣಿಕ ವರ್ಷಕ್ಕೆ ಈ ಮೇಲಿನ ಕಾಲೇಜುಗಳಲ್ಲಿ ಬಿ.ಎ. ಮತ್ತು ಬಿ.ಕಾಂ. ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿಗಳು ಆರಂಭವಾಗಿದೆ.  ಈ ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶದ ಆಸಕ್ತ ವಿದ್ಯಾರ್ಥಿಗಳು ಸಹ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮೈಸೂರು ವಿವಿ ಕುಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ.

Key words: Admission – graduate- courses – mysore university-college-application- submission.