ಇಂದು ನೆರೆ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈರಿಂದ ವೈಮಾನಿಕ ಸಮೀಕ್ಷೆ…

ಕಲಬುರುಗಿ,ಅಕ್ಟೋಬರ್,21,2020(www.justkannada.in):  ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆ ನೆರೆಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.jk-logo-justkannada-logo

ಭಾರಿ ಮಳೆಯಿಂದಾಗಿ ಭೀಮಾನದಿ ಅಪಾಯಮಟ್ಟ ಮೀರಿ ಹರಿದ ಹಿನ್ನೆಲೆ ವಿಜಯಪುರ, ಕಲಬುರುಗಿ ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಗಳ ಹಲವು ಗ್ರಾಮಗಳು ಜಲಾವೃತಗೊಂಡು ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.aerial-survey-cm-bs-yeddyurappa-flood-affected-districts-today

ನೆರೆಪೀಡಿತ ಜಿಲ್ಲೆಗಳಾದ ಕಲಬುರುಗಿ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಿಎಂ ಬಿಎಸ್ ವೈ ಬಳ್ಳಾರಿ ತಲುಪಿದ್ದು ಸಿಎಂಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದಾರೆ.

Key words: Aerial survey -CM BS yeddyurappa –flood-affected –districts- today.