Saturday, September 12, 2026

BDA Apartments

Home Front Page ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭದ ಸಂಭ್ರಮ: 1ರಿಂದ 5ನೇ ತರಗತಿ ಶುರು

ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭದ ಸಂಭ್ರಮ: 1ರಿಂದ 5ನೇ ತರಗತಿ ಶುರು

ಮೈಸೂರು, ಅಕ್ಟೋಬರ್ 25, 2021 (www.justkannada.in): ಇಂದಿನಿಂದ 1 ರಿಂದ 5 ನೇ ತರಗತಿ ಶಾಲೆ ಪುನಾರಂಭಗೊಂಡಿದೆ.

ಶಾಲೆ ಆರಂಭ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಶಾಲೆಗಳಲ್ಲಿ ಸಿದ್ದತೆ ನಡೆದಿದೆ. ತಳಿರು ತೋರಣ ಕಟ್ಟಿ ಮಕ್ಕಳನ್ನ ಬರಮಾಡಿಕೊಳ್ಳಲು ಶಾಲೆಗಳಲ್ಲಿ ಶಿಕ್ಷಕರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನು ಸಿಬ್ಬಂದಿ ಶಾಲೆ ಆವರಣ ಸ್ವಚ್ಛ ಮಾಡಿ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದ್ದರು. ಶಾಲೆ ಮುಂದೆ ರಂಗೋಲಿ ಬರೆದು ಮಕ್ಕಳನ್ನು ಶಿಕ್ಷಕರು ಬರಮಾಡಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ 1-5 ನೇ ತರಗತಿವರೆಗೆ 1,98,296 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಜಿಲ್ಲೆಯಲ್ಲಿ 2586 ಶಾಲೆಗಳಿದ್ದು, 12 ಸಾವಿರಕ್ಕೂ ಹೆಚ್ಚು ಶಿಕ್ಷಕರು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಶಾಲೆ ಆರಂಭಕ್ಕೆ ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿಕೊಂಡಿತ್ತು.