ಹೈಕಮಾಂಡ್ ನಿಂದ ಆದೇಶ ಬಂದ ಬಳಿಕ ಮತ್ತೆ ದೆಹಲಿಗೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು,ಜುಲೈ,31,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಹಿಂತಿರುಗಿದ್ದು, ಈ ನಡುವೆ ಹೈಕಮಾಂಡ್ ನಿಂದ ಆದೇಶ ಬಂದ ಬಳಿಕ ಮತ್ತೆ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ಮತ್ತೊಮ್ಮೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಚರ್ಚಿಸುತ್ತೇನೆ. ಹೈಕಮಾಂಡ್ ನಿಂದ ಸಂದೇಶ ಬಂದ ಬಳಿಕ ಮತ್ತೆ ದೆಹಲಿಗೆ ತೆರಳಿ ಚರ್ಚಿಸುತ್ತೇನೆ ಎಂದರು.

ಕೊರೊನಾ ನಿರ್ವಹಣೆ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸಲಿದ್ದೇನೆ. ಮಾಹಿತಿ ಪಡೆದು ನಂತರ ಕೊರೊನಾ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.lockdown-extension-cm-decision-home-minister-basavaraja-bommai

ಕೊರೋನಾ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸುತ್ತಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ.

Key words: After – orders – High Command-Delhi-CM- Basavaraja Bommai.