ಮತ್ತೆ ಇಡಿಯಿಂದ ಸಮನ್ಸ್: ಟ್ವೀಟ್ ಮೂಲಕ ಡಿ.ಕೆ ಶಿವಕುಮಾರ್ ಅಸಮಾಧಾನ.

ಬೆಂಗಳೂರು,ಸೆಪ್ಟಂಬರ್,15,2022(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ.

ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ್ದು ಈ ಕುರಿತು ಟ್ವಿಟ್ ಮಾಡಿ ಡಿ.ಕೆ ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.

ಭಾರತ್ ಜೋಡೋ ಯಾತ್ರಾ ಅಭಿಯಾನದ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ. ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ ಈ ಸಮನ್ಸ್‌ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Key words: Again -ED- summons –KPCC-president-DK Shivakumar