ಸಂವಿಧಾನದ  ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 24,2024(www.justkannada.in):   ನಾವು   ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ  ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉಲ್ಲೇಖಿಸಿದರು.

ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ  ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ  ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು. 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಈ  ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದರು.

ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ

ದೇಶದಲ್ಲಿ ಅಸಮಾನತೆಯನ್ನು ತೊಲಗಿಸಬೇಕು. ನಾವು ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ. ಸಂವಿಧಾನ ಯಶಸ್ವಿಯಾಗಲು ಇದು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ

ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ  ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದರು.

ಸಂವಿಧಾನ ಜಾರಿಯಾದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಂವಿಧಾನದ ಪೀಠಿಕೆ, ಆಶಯಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕೆಂದು 2024 ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಷ್ಠ ಸಂವಿಧಾನ

ಸಂವಿಧಾನವನ್ನು ಓದುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅನೇಕ ದೇಶಗಳ ಸಂವಿಧಾನ ಓದಿ ಅರ್ಥ ಮಾಡಿಕೊಂಡು ದೇಶದ ಸಮಸ್ಯೆಗಳಿಗೆ ಅಪರಿಹಾರ ಸೂಚಿಸುವ ರೀತಿಯಲ್ಲಿ ಸಂವಿಧಾನ ರಚಿಸಿದ್ದಾರೆ. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ ಎಂದರು.

ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅತ್ಯುತ್ತಮ ಚಟುವಟಿಕೆ ಆಯೋಜಿಸಿದ್ದ  ತುಮಕೂರು ಜಿಲ್ಲೆ, ದಾವಣಗೆರೆ,  ಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ  ವಿತರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ , ಸಚಿವ ಪ್ರಿಯಾಂಕ ಖರ್ಗೆ ಶಾಸಕ ಸೋಮಶೇಖರ್,ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ENGLISH SUMMARY…

If the Constitution is protected, we will all survive.

No one should tolerate defamation against the Constitution

Overthrow those who are against the Constitution : Chief Minister Siddaramaiah

Bengaluru, February 24: Chief Minister Siddaramaiah quoted Abraham Lincoln – We are the rightful Masters of the Constitution. Not to overthrow the Constitution, but to overthrow those who are against the Constitution.

He was speaking after inaugurating the Constitution and National Unity Conference organized by the Social Welfare Department at the Palace Grounds today.

There are two negative propaganda going on against the Constitution.That the Constitution is for the salvation of Dalits and is not in accordance with the socio-economic situation. It should be realized that people who are against it are giving it negative propaganda as the Constitution clearly states freedom, equality and fraternity. This propaganda has been going on since it came into effect on 26th January 1950.This should not be tolerated. If the Constitution is protected, we will all survive. Otherwise we will be in danger, he said.

Eradicating Social inequality is the responsibility of every Government

It is the responsibility of every government to eradicate inequality in the country. We are entering a society of contradictions. In a society with social and economic inequality, political democracy can succeed only when it rests on the foundations of social democracy. Ambedkar had said that those who suffer from inequality will destroy the edifice of democracy. Eradication of social inequality is the responsibility of every government. For the constitution to succeed, it is important to know in whose hands the power rests. The constitution will succeed if it is in the hands of those who are in favour of the constitution, equality and those who want to build a human society. If it is in the hands of those who are against the constitution, we have no survival. He said that the power should be in the hands of those who are in favour of the constitution to fulfill the wishes of the constitution.

As part of the Amrita Mahotsava celebration of the adoption of the Constitution, A constitution awareness Jatha has been organized in the state to make people understand the preamble, aspirations of the Constitution from 26 January 2024. The jatha has travelled trough 31 districts and has informed the people about the purpose, inevitability and necessity of the constitution. He said that the National Unity Conference will be held for two days.

Great Constitution
Chief Minister advised that every one must read the Constitution.Baba Saheb Ambedkar, who as the Chairman of the Constitution Drafting Committee read and understood the constitutions of many countries and drafted the constitution in such a way as to suggest solutions to the country’s problems. He said that the constitution of India is the greatest constitution.

On the same occasion, the Chief Minister distributed prizes and mementos to Tumkur , Davangere, Mysore, Kodagu, Bellary districts for organizing the best activities.

Legislative Council Chairman Basavaraja Horatti, Social Welfare Minister Dr. HC Mahadevappa, Supreme Court Retired Justice Gopal Gowda, High Court Retired Justice Nagamohan Das, Minister Priyanka Kharge MLA Somasekar, Additional Chief Secretary Dr. Shalini Rajneesh were present.

Key words: against – constitution -Overthrow  -CM -Siddaramaiah