ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ- ಮಾಜಿ ಸಚಿವ ಅರಗ ಜ್ಞಾನೇಂದ್ರ ಆರೋಪ.

ಶಿವಮೊಗ್ಗ,ಆಗಸ್ಟ್,7,2023(www.justkannada.in): ಕೃಷಿಗೆ ಮೀಸಲಿಟ್ಟ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರ ಆರೋಪ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅರಗ ಜ್ಞಾನೇಂದ್ರ, ಕಾಂಗ್ರೆಸ್ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ತೆಗೆದಿದ್ದಾರೆ. ಸರ್ಕಾರ ರೈತರ ಶಾಪಕ್ಕೆ ಇಷ್ಟು ಬೇಗ ಗುರಿಯಾಗಬಾರದು.  ಹಾಗೆಯೇ ಎಸ್​ಸಿ, ಎಸ್​ಟಿಗೆ ಮೀಸಲಿಟ್ಟ ಹಣವನ್ನೂ ಸಹ ಗ್ಯಾರಂಟಿಗೆ ಬಳಸುತ್ತಿದ್ದಾರೆ. ಈ ಹಿಂದೆಯೂ ವರ್ಗಾವಣೆಯಲ್ಲಿ ಕೆಲ ನ್ಯೂನ್ಯತೆ ಸರಿಪಡಿಸುತ್ತಿದ್ದೇವು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದಲ್ಲಿ ವರ್ಗಾವಣೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ಲಂಚಕೋರತನದ ಬಗ್ಗೆ ಇಡೀ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ಯಾವುದೇ ಕಾರಣಕ್ಕೂ ಜಾರಿಯಾಗಬಾರದು ಎಂದು ಕಿಡಿಕಾರಿದರು.

ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರ  ಕುರಿತು ಪ್ರತಿಕ್ರಿಯಿಸಿದ ಅರಗ ಜ್ಞಾನೇಂದ್ರ, ನಾನು ಖರ್ಗೆ ಅವರ ಹೆಸರನ್ನೇ ಹೇಳಿಲ್ಲ. ನನ್ನ ವಿರುದ್ಧ ಕಾಂಗ್ರೆಸ್​ನವರು ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಲಿತರ ವಿರೋಧಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

Key words: agriculture – guarantee-schemes-Former minister- Araga jnanendra