Saturday, August 15, 2026

BDA Apartments

Home Front Page ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್…

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್…

ಬೆಂಗಳೂರು,ಮಾರ್ಚ್,22,2021(www.justkannada.in): ಕೇಂದ್ರದ ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನಾಸ್ಥಳಕ್ಕೆ ಕೃಷಿ ಸಚಿವ ಬಿ.ಸಿ ಪಾಟೀಲ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.jk

ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರದ ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಹೋರಾಟ-ಕರ್ನಾಟಕ ರೈತ ದಲಿತ ಕಾರ್ಮಿಕ ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಸೂಚನೆಯನುಸಾರ  ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಸ್ವೀಕರಿಸಿದರು.

ಮನವಿಯಲ್ಲಿರುವ ಅಂಶಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿಯೂ ಈ ಸಂಬಂಧ ಸರ್ಕಾರದ ಜೊತೆ ಚರ್ಚಿಸುವುದಾಗಿ ಬಿಸಿಪಾಟೀಲ್ ಹೇಳಿದರು.

Key words: Agriculture Minister-BC Patil, – farmers’ protest – received – request.