ಎಐಸಿಸಿ ಅಧ್ಯಕ್ಷ ಚುನಾವಣೆ: ನಾಮಪತ್ರ ಸಲ್ಲಿಸಿದ  ಮಲ್ಲಿಕಾರ್ಜುನ ಖರ್ಗೆ.

ನವದೆಹಲಿ,ಸೆಪ್ಟಂಬರ್,30,2022(www.justkannada.in): ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಸ್ಪರ್ಧೆಗಿಳಿದಿದ್ದಾರೆ.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕಿಂತ ಮುನ್ನ ಶಶಿ ತರೂರ್  ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ , ಚುನಾವಣೆಯಲ್ಲಿ  ಗೆಲ್ಲುವ ವಿಶ್ವಾಸವಿದೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.

ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಕಣದಲ್ಲಿ ಯಾರು ಉಳಿಯುತ್ತಾರೆ ಎಂಬುವುದನ್ನು ಕಾದು ನೋಡಬೇಕಿದೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಶಶಿತರೂರ್ ಸ್ಪಷ್ಟಪಡಿಸಿದ್ದಾರೆ.

ಈ ಮೊದಲು ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್ ಹೆಸರು ಕೇಳಿ ಬಂದಿದ್ದವು. ಆದರೆ, ಈ ಇಬ್ಬರು ನಾಯಕರು ಕಡೇ ಕ್ಷಣದಲ್ಲಿ ಹಿಂದೆ ಸರಿದರು.

Key words: AICC-President –Election-Mallikarjuna Kharge-filed -nomination