ಇಬ್ಬರನ್ನೂ ಕರೆಸಿ ಮಾತನಾಡಿ ಸೆಟಲ್ ಮಾಡುತ್ತೇವೆ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ನವೆಂಬರ್, 27,2025 (www.justkannada.in):  ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಸಂಬಂಧ ಗೊಂದಲ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೈಕಮಾಂಡ್ ಎಲ್ಲರನ್ನೂ ಕರೆಸಿ ಮಾತನಾಡುತ್ತದೆ.  ಇಬ್ಬರನ್ನೂ ಕರೆಸಿ ಮಾತನಾಡಿ ಸೆಟಲ್ ಮಾಡುತ್ತೇವೆ ಎಂದಿದ್ದಾರೆ.

ಇಂದಯ ಮಾಧ್ಯಮದೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಮೂರರಿಂದ ನಾಲ್ಕು ಮಂದಿ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುತ್ತೇವೆ. ಎಲ್ಲರೂ ಒಟ್ಟಿಗೆ ಕೂತು ಚರ್ಚೆ ನಡೆಸುತ್ತೇವೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ಎಂಬುದು ಏಕಾಂಗಿ ಅಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಏನು ಮಾಡಬೇಕೆಂದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Key words: Power sharing, talk, both of them, AICC President, Mallikarjun Kharge