Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವ ಸತೀಶ್ ಜಾರಕಿಹೊಳಿ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಅಕ್ಟೋಬರ್,4,2024 (www.justkannada.in):  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,   ‘ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದರು.

ರಾಜ್ಯದಲ್ಲಿ  ದಲಿತ ಮುಖ್ಯಮಂತ್ರಿ ಕೂಗು ಎದ್ದಿಲ್ಲ. ‘ನಮ್ಮ ಪಕ್ಷದಿಂದ‌ ಸಿ. ಎಂ ಮೇಲೆ ಯಾವುದೇ ಒತ್ತಡವಿಲ್ಲ. ಎರಡು ತಿಂಗಳಿನಿಂದ ವಿರೋಧ ಪಕ್ಷಗಳು ಈ ವಿಚಾರವಾಗಿ ಒತ್ತಡ ತರುತ್ತಿವೆ. ಆದರೆ, ನಾವು ಕಾನೂನು ರೀತಿಯಾಗಿ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವ...

Key words: AICC President, Mallikarjun Kharge, meet, Minister, Satish Jarakiholi