ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕಲ್ಬುರ್ಗಿಗೆ ಮಲ್ಲಿಕಾರ್ಜುನ ಖರ್ಗೆ ಆಗಮನ: ‘ಕೈ’ ಮುಖಂಡರಿಂದ ಅದ್ಧೂರಿ ಸ್ವಾಗತ.

ಕಲ್ಬುರ್ಗಿ ,ಡಿಸೆಂಬರ್,10,2022(www.justkannada.in): ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (AICC) ಅಧ್ಯಕ್ಷರಾದ ಬಳಿಕ  ಮೊದಲ ಬಾರಿಗೆ  ಮಲ್ಲಿಕಾರ್ಜುನ ಖರ್ಗೆ ತಮ್ಮ ತವರೂರು ಕಲ್ಬರ್ಗಿಗೆ ಆಗಮಿಸಿದ್ದು ಕಾಂಗ್ರೆಸ್ ಮುಖಂಡರು ಅದ‍್ಧೂರಿಯಾಗಿ ಸ್ವಾಗತ ಕೋರಿದರು.

ದೆಹಲಿಯಿಂದ ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರ ಬೃಹತ್ ಮೆರವಣಿಗೆ ನಡೆಯಲಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಹಾಗೆಯೇ ಕಾಂಗ್ರೆಸ್  ‘ಕಲ್ಯಾಣ ಕ್ರಾಂತಿ’ ಹೆಸರಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಬೃಹತ್‌ ಕಾಂಗ್ರೆಸ್‌ ಸಮಾವೇಶವನ್ನೂ ಹಮ್ಮಿಕೊಳ್ಳಲಾಗಿದೆ. ಮೂರು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು , ಈ ನಿಟ್ಟಿನಲ್ಲಿ ತನ್ನದೇ ತಂತ್ರ ಹೆಣೆಯುತ್ತಿರುವ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆ ಸಮಾವೇಶ ಜೊತೆಗೆ ಕಲ್ಯಾಣ ಕ್ರಾಂತಿಯನ್ನು ಕೂಡ ಹಮ್ಮಿಕೊಂಡಿದೆ.

Key words: AICC president-Mallikarjuna Kharge- arrived – Kalburgi