ನನ್ನ ಜವಾಬ್ದಾರಿ ಹೆಚ್ಚಳವಾಗಿದೆ: ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆ- ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಅಕ್ಟೋಬರ್,19,2022(www.justkannada.in): ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದರಿಂದ ನನ್ನ ಜವಾಬ್ದಾರಿ ಮತ್ತಷ್ಟು  ಹೆಚ್ಚಳವಾಗಿದೆ. ಎಲ್ಲರನ್ನೂ ಒಂದುಗೂಡಿಸಿ ಕಾಂಗ್ರೆಸ್ ಪಕ್ಷ ಮುನ್ನಡೆಸುವೆ ಎಂದು ನೂತನ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ  ಮಲ್ಲಿಕಾರ್ಜುನ ಖರ್ಗೆ ನುಡಿದರು.

ನವದೆಹಲಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ಅರ್ಪಿಸಿದರು. ಎಲ್ಲರನ್ನೂ  ಒಗ್ಗೂಡಿಸಿ ಕಾಂಗ್ರೆಸ್ ಮುನ್ನಡೆಸುವೆ. ದೇಶಾದ್ಯಂತ ಪಕ್ಷವನ್ನ ಸಂಘಟಿಸಲು ಮತ್ತಷ್ಟು ಪ್ರಯತ್ನಿಸುವೆ.  ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇವೆ.  ಯುವ ನಾಯಕರು, ಹಿರಿಯ ನಾಯಕರ ಜೊತೆಗೂಡಿ ಕೆಲಸ ಮಾಡುತ್ತೇನೆ ಎಂದರು.

ಅಕ್ಟೋಬರ್ 26 ರಂದು ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನಲೆ ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.  ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಧನ್ಯವಾದ  ಅರ್ಪಿಸುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ ಎಲ್ಲಾ ನಾಯಕರಿಗೂ ಧನ್ಯವಾದ.  ಖರ್ಗೆ ಆಯ್ಕೆಯಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ ಬಂದಿದೆ. ನಿಜಲಿಂಗಪ್ಪ ಬಳಿಕ ಕನ್ನಡಿಗ ಖರ್ಗೆಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ.  ಖರ್ಗೆ ಅವರು  ಪಕ್ಷಕ್ಕಾಗಿ 50 ವರ್ಷ ಸೇವೆ ಮಾಡಿದ್ದಾರೆ. ಪಕ್ಷನಿಷ್ಠೆ,  ತ್ಯಾಗ ಹೋರಾಟದ ಚಟ ಇದ್ದರೇ ಒಳ್ಳೆಯ ಅವಕಾಶ ಸಿಗುತ್ತೆ ಇದಕ್ಕೆ ಖರ್ಗೆ ಅವರೇ ಸಾಕ್ಷಿ ಎಂದರು.

Key words: AICC-President-Mallikarjuna Kharge-congress