ಕೇಂದ್ರ ಗೃಹಸಚಿವ ಅಮಿತ್ ಶಾಗೆ ಪತ್ರ ಬರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ನವದೆಹಲಿ,ಜನವರಿ,24,2024(www.justkannada.in): ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ತಡೆಯೊಡ್ಡಿದ ಹಿನ್ನೆಲೆ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ  ಕೇಂದ್ರಗೃಹ ಸಚಿವ ಅಮಿತ್ ಶಾಗೆ ಎಐಸಿಸಿ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ರಾಹುಲ್ ಗಾಂಧಿ ಅವರ ಭದ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಜನವರಿ 22ರಂದು ನಾಗಾಂವ್​ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಅಡ್ಡಿಪಡಿಸಿದರು. ಭಾರತ್ ನ್ಯಾಯಯಾತ್ರೆಗೆ ಅಡ್ಡಿಪಡಿಸಿ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಸ್ಸಾಂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ.  ಕೆಲವೊಮ್ಮೆ ಕಾರ್ಯಕರ್ತರ ಬೆಂಗಾವಲು ವಾಹನವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಹೀಗಾಗಿ ರಾಹುಲ್ ಗಾಂಧಿ ಭದ್ರತೆಗೆ ಅಪಾಯವಿದೆ ಅಮಿತ್ ಶಾ ಮಧ್ಯಪ್ರವೇಶಿಸಿ ರಾಹುಲ್ ಗಾಂಧಿ ಹಾಗೂ ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪತ್ರದಲ್ಲಿ ಒತ್ತಾಯಿಸುತ್ತೇನೆ. ದೈಹಿಕ ಹಾನಿಗೆ ಕಾರಣವಾಗುವ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾಂಗ್ರೆಸ್ ನಾಯಕರಿಗೆ ಸೂಕ್ತ ಭದ್ರತೆ ಒದಗಿಸಲು ಅಸ್ಸಾಂ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯು ಜನವರಿ 14 ರಂದು ಮಣಿಪುರದ ಇಂಫಾಲ್‌ ನಿಂದ ಪ್ರಾರಂಭವಾಯಿತು ಮತ್ತು ಮುಂಬೈನಲ್ಲಿ ಕೊನೆಗೊಳ್ಳುವ ಈ ಯಾತ್ರೆ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ.

Key words: AICC president-Mallikarjuna Kharge – letter – Union Home Minister- Amith Shah.