Saturday, August 15, 2026

BDA Apartments

Home Front Page ಎಐಸಿಸಿ ಅಧ್ಯಕ್ಷರು ನಮ್ಮ ರಾಜ್ಯದವರು: ಅವರ ಭೇಟಿ ತಪ್ಪೇನಿದೆ- ಡಿಸಿಎಂ ಡಿಕೆ ಶಿವಕುಮಾರ್

ಎಐಸಿಸಿ ಅಧ್ಯಕ್ಷರು ನಮ್ಮ ರಾಜ್ಯದವರು: ಅವರ ಭೇಟಿ ತಪ್ಪೇನಿದೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಅಕ್ಟೋಬರ್,5,2024 (www.justkannada.in): ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು ಮತ್ತು ನಮ್ಮ ರಾಜ್ಯದವರು. ಹೀಗಾಗಿ ಅವರನ್ನ ಭೇಟಿ ಮಾಡಿದರೇ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ನಿನ್ನೆ ಎಐಸಿಸಿ ಅಧ್ಯಕ್ಷರ ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ಅಧ್ಯಕ್ಷರಾಗಿದ್ದಾರೆ.  ಅವರನ್ನು ಭೇಟಿ ಮಾಡದೇ  ಮತ್ತೆ ಯಾರನ್ನ ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

“ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ . ವೇಣುಗೋಪಾಲ್ ಅವರು ರಾಜ್ಯಕ್ಕೆ  ಬರುವ ವಿಚಾರ ಗೊತ್ತಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಸದ್ಯಕ್ಕೆ ನಾನು ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ ಎಂದರು.

Key words: AICC President, mallikarjuna kharge, meet, DCM, DK Shivakumar