ಮೈಸೂರು,ಸೆಪ್ಟಂಬರ್,22,2025 (www.justkannada.in): ಸ್ವಸ್ಥನಾರಿ ಸಶಕ್ತ ಪರಿವಾರ ಕಾರ್ಯಕ್ರಮದ ಅಂಗವಾಗಿ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಉಚಿತ ಮಾತು ಮತ್ತು ಶ್ರವಣ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಸಂಸ್ಥೆಗೆ ಭೇಟಿ ನೀಡುವ ಎಲ್ಲಾ ಹೆಣ್ಣು ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಉಚಿತ ಉಚಿತ ಮಾತು ಮತ್ತು ಶ್ರವಣ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಸೆಪ್ಟೆಂಬರ್ 23 ರಿಂದ 25 ರವರೆಗೆ ಈ ಶಿಬಿರ ನಡೆಯಲಿದೆ.
ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ ಮಾತು ಮತ್ತು ಶ್ರವಣ ತಪಾಸಣೆ ನಡೆಯಲಿದ್ದು ಆಸಕ್ತಿಯುಳ್ಳ ಹೆಣ್ಣು ಮಕ್ಕಳು ಹಾಗೂ ಮಹಿಳೆಯರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ನೋದಾಯಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಸಂಪರ್ಕ ಸಂಖ್ಯೆ: 9141036292
Key words: Free, speech and hearing, screening camp , AIISH, Mysore