ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು: ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ ಹೆಚ್.ಡಿ ರೇವಣ್ಣ.

ಹಾಸನ,ಮಾರ್ಚ್,8,2023(www.justkannada.in): ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಹಾಸನ ಜಿಲ್ಲಾ ಬಿಜೆಪಿ ಮುಖಂಡರಿಗೆ ಮಾನ ಮರ್ಯಾದೆ ಏನೂ ಇಲ್ಲ ಎಂದು ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಕಿಡಿಕಾರಿದರು.

ಹಾಸನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಿದ ಬಳಿಕ 5 ವರ್ಷ ಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಕೆಲಸ ಮತ್ತೆ ಪುನಾರಂಭವಾಗಿ 1 ವರ್ಷ ಕಳೆದರು ಅಡಿಗಲ್ಲು ಹಾಕುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗೊತ್ತಿದೆಯೋ ಇಲ್ವೋ ನನಗೆ ಗೊತ್ತಿಲ್ಲ ಎಂದು ಕುಟುಕಿದರು.

ಆಸ್ಪತ್ರೆ ಕಟ್ಟಡ ನಿರ್ಮಾಣ ಇನ್ನೂ ಮುಗಿದಿದ್ದರೂ ಉದ್ಘಾಟನೆಗೆ ಹೊರಟಿದ್ದಾರೆ. ಬರುವ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆಲ್ಲುತ್ತಾರೆ ಅಂತ ಹೇಳಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅವರೇ ಉದ್ಘಾಟನೆ ಮಾಡಿಕೊಳ್ಳಲಿ. ನಾನು ಜಾರಿಗೆ ತಂದಿದ್ದ ಯೋಜನೆಗೆ ಅಡಿಗಲ್ಲು ಹಾಕಲು ಮುಂದಾಗಿದ್ದಾರೆ. ಹಾಗೇನಾದರೂ ಮಾಡಲು ಮುಂದಾದರೇ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Key words: airport-former Minister- HD Revanna – BJP – no dignity.