ಬಾರಾಮತಿ,ಜನವರಿ,29,2026 (www.justkannada.in): ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಮಹಾರಾಷ್ಟ್ರದ ಬಾರಾಮತಿಯಲ್ಲಿನ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಪುತ್ರರಾದ ಪಾರ್ಥ ಪವಾರ್, ಜೈ ಪವಾರ್ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವರು, ಮಹಾರಾಷ್ಟ್ರ ಸಿಎಂ, ಡಿಸಿಎಂ ಗಣ್ಯಾತಿಗಣ್ಯರು ಸಾವಿರಾರು ಅಭಿಮಾನಿಗಳು ಭಾಗಿಯಾಗಿದ್ದರು.
Key words: Maharashtra, DCM, Ajit Pawar, funeral







