Tuesday, August 11, 2026

BDA Apartments

Home Front Page ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ.

ಬೆಂಗಳೂರು,ಏಪ್ರಿಲ್,17,2024 (www.justkannada.in): ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು.

ನಗರದ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿ ಸೇರ್ಪಡೆಯಾದರು.

ಈ ವೇಳೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತಿದ್ದರು.

ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪ, ಇಂದು ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಶ್ರೀನಿವಾಸ್ ಮೂರ್ತಿ ಅವರು ಬೆಂಬಲಿಗರೊಂದಿಗೆ ಸೇರ್ಪಡೆಯಾಗುತ್ತಿದ್ದು ಪಕ್ಷಕ್ಕೆ ಹೆಚ್ಚು ಶಕ್ತಿ ನೀಡಲಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಸಂಧರ್ಭದಲ್ಲಿ ಶ್ರೀನಿವಾಸ್ ಮೂರ್ತಿ ಅವರ ಮನೆ ಸುಟ್ಟು ಹಾಕಿದ್ದರು. ಆಗ ಕಾಂಗ್ರೆಸ್ ಇವರಿಗೆ ಬೆಂಬಲ ನೀಡಲಿಲ್ಲ. ನಾವು ಆಗ ಇವರ ಬೆಂಬಲಕ್ಕೆ ನಿಂತೆವು, ಅವರ ಆಗಮನ ಆನೆ ಬಲ ಬಂದಂತಾಗಿದೆ ಎಂದಿದ್ದಾರೆ.

Key words: Akhand Srinivas Murthy,  joined, BJP