Sunday, October 4, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಅಗಲಿದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ.

ಅಗಲಿದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ.

ವಿಜಯಪುರ,ಜನವರಿ,3,2023(www.justkannada.in): ಲಿಂಗೈಕ್ಯರಾದ  ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ಸಕಲ ಸರ್ಕಾರಿ ಗೌರವವನ್ನ ಸಲ್ಲಿಸಲಾಯಿತು.

ಸೈನಿಕ ಶಾಲೆ ಮೈದಾನದಲ್ಲಿ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಮೂಲಕ ಅಂತಿಮ ನಮನ  ಸಲ್ಲಿಸಲಾಯಿತು.

ಸಿಎಂ ಬಸವರಾಜ ಬೊಮ್ಮಾಯಿ.  ಮಾಜಿ ಸಿಎಂಗಳಾದ  ಬಿಎಸ್  ಯಡಿಯೂರಪ್ಪ, ಜಗದೀಶ್ ಶೆಟ್ಟರ್ ವಿಧಾನಪರಿಷತ್ ಸಭಾಪತಿ  ಬಸವರಾಜ ಹೊರಟ್ಟಿ, ಸಚಿವ ಗೋವಿಂದ ಕಾರಜೋಳ, ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಸುತ್ತೂರು ಶ್ರೀ,  ನಿರ್ಮಲಾನಂದ ಶ್ರೀ ಸಚಿವರಾದ ಮುರುಗೇಶ್ ನಿರಾಣಿ ಶ್ರೀರಾಮುಲು, ಶಶಿಕಲಾ ಜೊಲ್ಲೆ ಅವರು ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅಗಲಿದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ proud

ಸರ್ಕಾರಿ ಗೌರವ ಸಲ್ಲಿಕೆ ಬಳಿಕವೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ.

Key words: All -Government -Tributes – Shri Siddheshwar Swamiji.