ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ,ಮೇ,7,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ 4 ಮತ್ತು ಪಿಒಕೆಯ 5 ಉಗ್ರರ ನೆಲೆಗಳನ್ನ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು ಈ ಬೆನ್ನಲ್ಲೆ ಕೇಂದ್ರ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ.

ನಾಳೆ 11 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಹಲವರು ಭಾಗಿಯಾಗಲಿದ್ದಾರೆ.

ನಾಳೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಎಲ್ಲಾ ಪಕ್ಷಗಳಿಗೂ ಕೇಂದ್ರ ಸಚಿವರು ಮಾಹಿತಿ ನೀಡಲಿದ್ದಾರೆ.

Key words: Operation Sindoora, Central government,all-party meeting