ಏಕದಿನ ವಿಶ್ವಕಪ್ ನಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಔಟ್.

ನವದೆಹಲಿ,ನವೆಂಬರ್,4,2023(www.justkannada.in):  ಏಕದಿನ ವಿಶ್ವಕಪ್ ಟೂರ್ನಿಯಿಂದ ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಔಟ್ ಆಗಿದ್ದಾರೆ.

ಈ ಕುರಿತು ಬಿಸಿಸಿಐ ಘೋಷಣೆ ಮಾಡಿದ್ದಯ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯ ಪಂದ್ಯಾವಳಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು  ಹೇಳಿದೆ.

ಪುಣೆಯಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಎಡ ಪಾದದ ಗಾಯಕ್ಕೆ ಒಳಗಾಗಿದ್ದರು ಮತ್ತು ನಂತರ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಂದ ಹೊರಗುಳಿದಿದ್ದರು. ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳದ ಹಾರ್ದಿಕ್ ಪಾಂಡ್ಯ ಐಸಿಸಿ ಏಕದಿನ ವಿಶ್ವಕಪ್ 2023ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಹಾರ್ದಿಕ್ ಪಾಂಡ್ಯ ಬದಲಿಗೆ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನುತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಏಳಕ್ಕೆ ಏಳು ಪಂದ್ಯಗಳನ್ನ ಗೆದಿದ್ದರು ಭಾರತ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ.ಇನ್ನುಳಿದ ಎರಡು ಪಂದ್ಯಗಳು ನಾಳೆ ದಕ್ಷಿಣ ಆಫ್ರಿಕಾ ಜೊತೆ ಆಡಿದರೇ 9ನೇ ಪಂದ್ಯವನ್ನ ನೆದರ್ ಲ್ಯಾಂಡ್ ವಿರುದ್ದ ಸೆಣೆಸಾಡಲಿದೆ.

Key words: All-rounder -Hardik Pandya- out –ODI- World Cup.