ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಎಲ್ಲಾ ರೀತಿಯ ಕ್ರಮ- ಸಿಎಂ ಬೊಮ್ಮಾಯಿ ಭರವಸೆ.

ಶಿವಮೊಗ್ಗ,ಫೆಬ್ರವರಿ,8,2023(www.justkannada.in): ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಶಿವಮೊಗ್ಗದ ಐಬಿಯಲ್ಲಿ ವಿಐಎಸ್ ಎಲ್ ಕಾರ್ಮಿಕ ಮುಖಂಡರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಈ ವೇಳೆ ವಿಐಎಸ್ ಎಲ್  ಕಾರ್ಖಾನೆ ಮುಚ್ಚುವ ಆದೇಶ ನಿಲ್ಲಿಸುವ ಕೆಲಸ ಮಾಡುತ್ತೇನೆ ಕಾರ್ಖಾನೆಯ ಪುನಶ್ಚೇತನಕ್ಕೆ ಎಲ್ಲಾ ಕ್ರಮ ಕೈಗೊಳ್ಳೂತ್ತೇವೆ ಎಂದು ತೀರ್ಮಾನ ತೆಗೆದುಕೊಂಡರು.

ಇದಕ್ಕೂ ಮುನ್ನ ಶಿವಮೊಗ್ಗಕ್ಕೆ ಆಗಮಿಸಿ ಹೆಲಿಪ್ಯಾಡ್‍ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ,  ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ  ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿಐಎಸ್ ಎಲ್ ಕಾರ್ಮಿಕರಿಕರಿಗೆ ನಿರಾಳವಾದಂತಾಗಿದೆ.

Key words: All steps –revive- Bhadravati- VISL- factory- CM Bommai