ಅನುದಾನದ ವಿಚಾರದಲ್ಲಿ ಕೇಂದ್ರ ತಾರತಮ್ಯ ಆರೋಪ: ಮಾಜಿ ಸಚಿವ ಸಿ.ಟಿ ರವಿ ತಿರುಗೇಟು.

ಚಿಕ್ಕಮಗಳೂರು,ಜನವರಿ,10,2024(www.justkannada.in): ರಾಜ್ಯಕ್ಕೆ ಬರಬೇಕಾದ ಅನುದಾನದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಚಿವ ಸಿ.ಟಿ ರವಿ, ಕೇಂದರ ಯಾವುದೇ ರಾಜ್ಯಕ್ಕೂ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಸಿಎಂ ಆರ್ಥಿಕ ತಜ್ಞರಲ್ವಾ..? ಹಣಕಾಸು ಸಚಿವರಲ್ಲವಾ..? 2004 ರಿಂದ 2014ರವರೆಗೆ ಯುಪಿಎ ಸರ್ಕಾರ ಇತ್ತು. ಆಗ  ಕರ್ನಾಟಕಕ್ಕೆ ತೆರಿಗೆ ಪಾಲು ಎಷ್ಟು ಕೊಟ್ಟಿದ್ದಾರೆ ಅಂತ ಅಂಕಿ ಅಂಶ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

Key words: Allegation – central -discrimination – grants-CM-Siddaramaiah- CT Ravi