ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಆರೋಪ: ಇಬ್ಬರು ಜೆಡಿಎಸ್ ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ನೊಟೀಸ್.

ಬೆಂಗಳೂರು,ಅಕ್ಟೋಬರ್,3,2022(www.justkannada.in): ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಜೆಡಿಎಸ್ ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಕಾರಣ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.

ಕೋಲಾರ ಶಾಸಕ ಶ್ರೀನಿವಾಸ್ ಗೌಡ ಮತ್ತು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಗೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆ ವೇಳೆ ಇಬ್ಬರು ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ದೂರು ನೀಡಿತ್ತು.

ಈ ಹಿನ್ನೆಲೆಯಲ್ಲಿ ಲಿಖಿತ ರೂಪದಲ್ಲಿ ಕಾರಣ ತಿಳಿಸುವಂತೆ ಇಬ್ಬರು ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ನೀಡಿದ್ದಾರೆ.

Key words: Allegation –cross-voting -Rajya Sabha elections-notice -JDS -MLA