ವರ್ಗಾವಣೆ ದಂಧೆ ಆರೋಪ: ಹೆಚ್.ಡಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್.

ಬೆಂಗಳೂರು,ಆಗಸ್ಟ್,4,2023(www.justkannada.in):  ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಎಂದು ಆರೋಪಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ ಎಂಬುದು ಸರಿಯಲ್ಲ. ಹೆಚ್.ಡಿ ಕುಮಾರಸ್ವಾಮಿ ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ ಕೆಲವು ಸ್ಥಳಗಳಿಗೆ ದಕ್ಷ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗುತ್ತಿದೆ.  ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವರ್ಗಾವಣೆ ಮಾಡಲಾಗುತ್ತಿದೆ ಕಾರಣಾಂತರದಿಂದ ಕೆಲವರ ವರ್ಗಾವಣೆಗೆ ತಡೆ ನೀಡಲಾಗಿದೆ. ಇದನೆಲ್ಲಾ ಸರಿಪಡಿಸುತ್ತೇವೆ ಎಂದು ತಿಳಿಸಿದರು.

Key words: Allegation – transfer –scam-Home Minister -G. Parameshwar -Tong – HDK.