ಯರಗೋಳ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆದೇಶಿಸಿದ ಸಿಎಂ ಸಿದ್ಧರಾಮಯ್ಯ…

ಕೋಲಾರ,ಜುಲೈ,15,2023(www.justkannada.in):  ಯರಗೋಳ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪದ ಬಗ್ಗೆ ದೂರು ಬಂದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು 160 ಕೋಟಿ ವೆಚ್ಚದಲ್ಲಿ ಯರಗೋಳ ಡ್ಯಾಂ ನಿರ್ಮಾಣ ಮಾಡಿದೆ. ಆದರೆ ಡ್ಯಾಂ ನಿರ್ಮಾಣ, ಪೈಪ್ ಲೈನ್ ಅಳವಡಿಕೆ, ಓವರ್ ಹೆಡ್ ಟ್ಯಾಂಕ್ ನಿರ್ಮಾಣದಲ್ಲಿ ನಿಗದಿಗಿಂತಲೂ ಹೆಚ್ಚುವರಿಯಾಗಿ ಹಣ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ದೂರು ನೀಡಿದ್ದರು.

ಈ ಸಂಬಂಧ ಇದೀಗ ಸಿಎಂ ಸಿದ್ಧರಾಮಯ್ಯ ಅವರು  ದೂರಿನ ಮೇರೆಗೆ ತನಿಖೆಗೆ ಆದೇಶಿಸಿದ್ದಾರೆ.

Key words: Allegation – Yaragola- irrigation- project- illegal -CM Siddaramaiah -investigation