ಶ್ರೀರಾಮನಿಗೆ ಅವಹೇಳನ ಆರೋಪ: ಶಾಲಾ ಶಿಕ್ಷಕಿ ಅಮಾನತು.

0
6

ಮಂಗಳೂರು, ಫೆಬ್ರವರಿ,12,2024(www.justkannada.in): ಶ್ರೀರಾಮ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನ  ಮಾಡಿದ ಆರೋಪ ಮೇಲೆ ಜೆಪ್ಪುನಲ್ಲಿರುವ ಸಂತ ಜೆರೋಸಾ ಶಾಲೆಯ ಶಿಕ್ಷಕಿಯೊಬ್ಬರನ್ನ ಅಮಾನತು ಮಾಡಲಾಗಿದೆ.

ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಶಾಲೆಯ ಆಡಳಿತ ಮಂಡಳಿ ಅಮಾನತು ಮಾಡಿದೆ ಎನ್ನಲಾಗಿದೆ. . ದೇವರಿಗೆ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ಜೆರೋಸಾ ಶಾಲೆಯ 7ನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಶಿಕ್ಷಕಿ ಶಾಲಾ ಮಕ್ಕಳಿಗೆ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನ ಮಾಡಿದ್ದಾರೆ. ಅಲ್ಲದೆ ಅವಹೇಳನದ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಲು ನಿರ್ಧರಿಸಿದ್ದು, ಎಲ್ಲಾ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲಾ ಆವರಣದಲ್ಲಿ ಸೇರುವಂತೆ ಸಂದೇಶ ರವಾಸಿದ ಆಡಿಯೋ ವೈರಲ್ ಆಗಿತ್ತು.

ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡು  ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿತ್ತು. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದಿದ್ದರು. ಎನ್ನಲಾಗಿದೆ.

ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್​ನಲ್ಲಿ ಅಮಾನತ್ತಿನ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ.

Key words: Alleged- insult – Sri Ram- School –teacher- suspended-mangalore