ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಕೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ದಾವಣಗೆರೆ, ಏಪ್ರಿಲ್, 16,2024 (www.justkannada.in): ಬಿಜೆಪಿ-ಜೆಡಿಎಸ್ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಸೀಮಿತವಲ್ಲದೇ  ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು  ಮಾಜಿ ಸಿಎಂ  ಬಿ.ಎಸ್. ಯಡಿಯೂರಪ್ಪ  ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯ. ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಮೈತ್ರಿ ಮುಂದುವರೆಯಬೇಕು ಎಂಬುದು ಜನರ ಆಶಯವಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ.  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನಕೊಡಲಿಲ್ಲ.  ನೆಹರು ಕುಟುಂಬಕ್ಕೆ ಭಾರತ ರತ್ನ ಕೊಟ್ಟರು.  ಎಸ್ ಸಿ,  ಎಸ್ ಟಿ ಹಣ ಬೇರೆ ಕಾರಣಕ್ಕೆ ಬಳಕೆ ಮಾಡಿಕೊಂಡರು ಎಂದು ಆರೋಪಿಸಿದರು.

Key words: Alliance, continue , BS Yeddyurappa