ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರ ಕಾರಣ: ಶಾಸಕ ಶ್ರೀರಾಮುಲು ವಿರುದ್ದ ದೂರು ನೀಡಲು ಕಾಂಗ್ರೆಸ್ ನಿರ್ಧಾರ…

ಕುಂದಗೋಳ,ಮೇ,9,2019(www.justkannada.in):  ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಶ್ರೀ ರಾಮುಲು ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಕಾಂಗ್ರೆಸ್ ನಾಯಕರು ಶಾಸಕ ಶ್ರೀರಾಮುಲು ವಿರುದ್ದ ಕುಂದಗೋಳ ಚುನಾವಣಾಧಿಕಾರಿಗೆ ದೂರು ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸಚಿವ ಡಿ.ಕೆ ಶಿವಕುಮಾರ್ ರಾತ್ರೋರಾತ್ರಿ ಸಂಸದ ಉಗ್ರಪ್ಪ ಅವರನ್ನ ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ.

ಡಿ.ಕೆ ಶಿವಕುಮಾರ್ ಚರ್ಚೆ ಬಳಿಕ ಶ್ರೀರಾಮುಲು ವಿರುದ್ದ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಿನ್ನೆ ಮಾತನಾಡಿದ ಶಾಸಕ ಶ್ರೀರಾಮುಲು “ಸಿಎಸ್ ಶಿವಳ್ಳಿ ಒಬ್ಬ ಒಳ್ಳೆಯ ವ್ಯಕ್ತಿ. ಅವರು ಈಗಿಲ್ಲ. ಆದ್ದರಿಂದ ಅವರ ಬಗ್ಗೆ ನಾನು ಮಾತನಾಡುದಕ್ಕೆ ಇಷ್ಟಪಡುವುದಿಲ್ಲ. ಆದರೆ ಅವರ ಸಾವಿಗೆ ಈ ಕಾಂಗ್ರೆಸ್ ಮೈತ್ರಿ ಸರ್ಕಾರವೇ ಕಾರಣ ಎಂಬುದು ಸತ್ಯ. ಅವರಿಗೆ ಮೈತ್ರಿ ಸರಕಾರದಲ್ಲಿ ನೀಡಲಾದ ಕಿರುಕುಳ ಮತ್ತು ಹೇರಿದ ಒತ್ತಡದಿಂದಲೇ ಅವರು ಹೃದಯಾಘಾತದಿಂದ ಮೃತರಾದರು ಎಂದು ಹೇಳಿಕೆ ನೀಡಿದ್ದರು.

Key words: Alliance govrnament- responsible – death – Shivalli- Congress decision – file- complaint -against -MLA Shri Ramulu