ಮೈಸೂರು ಪಾಲಿಕೆಯಲ್ಲಿ ಮೈತ್ರಿ ವಿಚಾರ: ಶಾಸಕ ಎಲ್. ನಾಗೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ….

ಮೈಸೂರು,ಫೆಬ್ರವರಿ,12,2021(www.justkannada.in):  ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಯಾಗುವ ವಿಶ್ವಾಸವಿದೆ. ಈ ಬಾರಿ ನಮ್ಮ ಅವಧಿಯಲ್ಲಿ ಮೊದಲ ಬಿಜೆಪಿ ಮೇಯರ್ ಮಾಡುವ ವಿಶ್ವಾಸವಿದೆ ಎಂದು ಬಿಜೆಪಿ ಶಾಸಕ ಎಲ್. ನಾಗೇಂದ್ರ ತಿಳಿಸಿದ್ದಾರೆ.jk

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಮೈತ್ರಿ ವಿಚಾರದಲ್ಲಿ ನಾವು ಹಿಂದೆ ಬಿದ್ದಿಲ್ಲ. ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಯಾಗೋ ವಿಶ್ವಾಸವಿದೆ. ನಮ್ಮ ಪಕ್ಷದ ಮುಖಂಡರು ಮತ್ತು ಜಿಲ್ಲಾ ಉಸ್ತುವಾರಿಗಳು ಜೊತೆ ಚರ್ಚೆ ಮಾಡ್ತೇವೆ. ಈ ವಿಚಾರವಾಗಿ ಸದ್ಯ ಯಾವುದೇ ಮಾತುಕತೆ ಆಗಿಲ್ಲ ಎಂದರು. Alliance – Mysore city corporation-MLA -L. Nagendra

ಬಿಜೆಪಿಯಿಂದ ಈ ಬಾರಿ ಮೊದಲ ಮೇಯರ್ ಮಾಡೋ ಅವಕಾಶ ಇದೆ. ಈ ವಿಚಾರವಾಗಿ ನಾಳೆ ಸಿಎಂ ಜೊತೆ ಯಾವುದೇ ಮಾತುಕತೆ ಇಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಜಿಲ್ಲಾ ಮಂತ್ರಿಗಳಿಗೆ ನಿರ್ದೇಶನ ನೀಡಲಿದ್ದಾರೆ. ಅದರಂತೆ ಮುಂದಿನ ನಿರ್ಧಾರಗಳನ್ನ ಜಿಲ್ಲಾ ಮಂತ್ರಿಗಳು ಮಾಡಲಿದ್ದಾರೆ ಎಂದು ತಿಳಿಸಿದರು.

Key words: Alliance – Mysore city corporation-MLA -L. Nagendra