ಇಂದು ಮಧ್ಯಾಹ್ನದ ನಂತರ ಖಾತೆ ಹಂಚಿಕೆ ಫೈನಲ್- ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ…

ಬೆಂಗಳೂರು,ಆ,24,2019(www.justkannada.in):  ಸಚಿವ ಸಂಪುಟ ರಚನೆ ಬಳಿಕ ಖಾತೆ ಹಂಚಿಕೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲು ನವದೆಹಲಿಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಖಾತೆ‌ ಹಂಚಿಕೆ ಸಂಬಂಧ ಸಿಎಂ ಬಿ.ಎಸ್  ಯಡಿಯೂರಪ್ಪ  ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಷಾ ಜತೆ ಚರ್ಚಿಸಿದ್ದು, ಇಂದು ಮಧ್ಯಾಹ್ನದ ಬಳಿಕ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ  ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ನೂತನ ಸಚಿವರಿಗೆ ಖಾತೆ  ಹಂಚಿಕೆ  ಮತ್ತು ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ  ಬಗ್ಗೆ ಅಮಿತ್ ಶಾ ಜತೆ ಚರ್ಚೆ ನಡೆಸಲಾಗಿದೆ. ಇಂದು ಮಧ್ಯಾಹ್ನದ ನಂತರ ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಫೈನಲ್ ಆಗಲಿದೆ ಎಂದು ತಿಳಿಸಿದರು.

Key words: Allocation – Ministerial -position -Final – CM BS Yeddyurappa