ಮೈಸೂರಿನಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸಲು ಜನಪ್ರತಿನಿಧಿಗಳಿಗೆ ವಿವಿಧ ಜವಾಬ್ದಾರಿಗಳ ಹಂಚಿಕೆ…

ಮೈಸೂರು,ಮೇ,6,2021(www.justkananda.in): ಕೋವಿಡ್ ಹಿನ್ನೆಲೆಯಲ್ಲಿ  ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಜನಪ್ರತಿನಿಧಿಗಳು ಹಾಗೂ ಗಣ್ಯರಿಗೆ ವಿವಿಧ ಜವಾಬ್ದಾರಿ ನೀಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷರಾಗಿರುವ  ಜಿಲ್ಲಾ ಟಾಸ್ಕ್ ಫೋರ್ಸ್‌ಗೆ ಶಾಸಕ ಎಸ್.ಎ.ರಾಮದಾಸ್ ಅವರನ್ನು ಸಲಹೆಗಾರರಾಗಿ ನೇಮಿಸಲಾಗಿದೆ.jk

ಈ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹಾಸಿಗೆಗಳ ನಿರ್ವಹಣೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ  ಹೆಚ್.ವಿ.ರಾಜೀವ್ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಹೆಚ್.ವಿ.ರಾಜೀವ್ ಅವರು ಹಾಸಿಗೆ ನಿರ್ವಹಣೆಗೆ ನಿಯೋಜಿಸಿರುವ ಅಧಿಕಾರಿಗಳ ಜೊತೆಗೂಡಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವರು ಎಂದು ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಸಮರ್ಪಕ ನಿರ್ವಹಣೆಗೆ ಸ್ಥಾಪಿಸಲಾಗಿರುವ  ವಾರ್ ರೂಂ ಉಸ್ತುವಾರಿಯನ್ನು ನೋಡಿಕೊಳ್ಳಲು ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಆರ್. ರಘು ಕೌಟಿಲ್ಯ ಅವರನ್ನು ನೇಮಿಸಲಾಗಿದೆ. ಆರ್. ರಘು ಕೌಟಿಲ್ಯ ಅವರು ವಾರ್ ರೂಂ ನೋಡಲ್ ಅಧಿಕಾರಿಗಳೊಂದಿಗೆ ವಾರ್ ರೂಂ ಚಟುವಟಿಕೆಗಳ ಉಸ್ತುವಾರಿಯನ್ನು ನೋಡಿಕೊಳ್ಳುವರು.Allocation - responsibilities -Representatives -Corona situation - Mysore.

ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಅವರನ್ನು ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಆಮ್ಲಜನಕದ ಕೊರತೆ ಉಂಟಾಗದಂತೆ ಆಮ್ಲಜನಕ ಸರಬರಾಜು ಮೇಲ್ವಿಚಾರಣೆ ಹಾಗೂ ರೆಮ್ಡಿಸಿವಿರ್ ಔಷಧಗಳ ಸರಬರಾಜಿನ ಮೇಲ್ವಿಚಾರಣೆ ನಡೆಸಲು ಉಸ್ತುವಾರಿಯಾಗಿ ನೇಮಿಸಿರುವುದನ್ನು ಈಗಾಗಲೇ ಪ್ರಕಟಿಸಲಾಗಿದೆ. ಕೋವಿಡ್-19ಅನ್ನು ನಿಯಂತ್ರಿಸಲು ಎಲ್ಲರೂ ಒಟ್ಟಾಗಿ ಹೋರಾಡಬೇಕಾಗಿದ್ದು, ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

Key words: Allocation – responsibilities -Representatives -Corona situation – Mysore.