ಲಂಡನ್’ನ ಪ್ರತಿಷ್ಠಿತ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ!

ಬೆಂಗಳೂರು, ಸೆಪ್ಟೆಂಬರ್ 20, 2023 (www.justkannada.in): ಲಂಡನ್‌ನ ಪ್ರತಿಷ್ಠಿತ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್‌ ಮೇಣದ ಪ್ರತಿಮೆ ಸ್ಥಾಪನೆಯಾಗಲಿದೆ!

ಅಂದಹಾಗೆ ಈಗಾಗಲೇ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಮೇಣದ ಪ್ರತಿಮೆಗಳಿವೆ.

ಪ್ರತಿಷ್ಠಿತ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ಅಲ್ಲು ಅರ್ಜುನ್‌ ಮೇಣದ ಪ್ರತಿಮೆ ಸ್ಥಾಪನೆಯಾದರೆ ಈ ಸಾಧನೆ ಮಾಡಿದ ಮೂರನೇ ಟಾಲಿವುಡ್ ನಟ ಆಗಲಿದ್ದಾರೆ.

ಸದ್ಯದಲ್ಲೇ ಅಲ್ಲು ಅರ್ಜುನ್ ಲಂಡನ್‌ಗೆ ತೆರಳಲಿದ್ದು, ಈ ಪ್ರತಿಮೆಯನ್ನು ತಯಾರಿಸಲು ಅಳತೆ ನೀಡಲಿದ್ದಾರೆ ಎನ್ನಲಾಗಿದೆ.

ಸದ್ಯ ಅಲ್ಲು ಅರ್ಜುನ್ ಪುಷ್ಪ 2 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಪುಷ್ಪ ಚಿತ್ರದ ಮುಂದುವರಿದ ಭಾಗವಾಗಿ ತಯಾರಾಗುತ್ತಿರುವ ಈ ಚಿತ್ರವನ್ನು ಸುಕುಮಾರ್ ನಿರ್ದೇಶಿಸುತ್ತಿದ್ದಾರೆ.