ಬೆಂಗಳೂರು,ಸೆಪ್ಟಂಬರ್,15,2025 (www.justkannada.in): ನಟ ಸಾಹಸ ಸಿಂಹ ದಿ.ವಿಷ್ಣುವರ್ಧನ್ ಹಾಗೂ ನಟಿ ದಿ. ಬಿ.ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೆ ಇದೀಗ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ಕೇಳಿ ಬಂದಿದೆ.
ಈ ಸಂಬಂಧ ಹಿರಿಯ ನಟಿ ತಾರಾ ಅನುರಾಧ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ನಟಿ ತಾರಾ ಅನುರಾಧ ಮನವಿ ಸಲ್ಲಿಸಲಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲೂ ನಟ ರೆಬೆಲ್ ಸ್ಟಾರ್ ಅಂಬರೀಶ್ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಕಲಿಯುಗದ ಕರ್ಣ ಎಂದು ಕರೆಸಿಕೊಳ್ಳುವ ಜನಮೆಚ್ಚಿದ ಕಲಾವಿದ ಅಂಬರೀಶ್ ಚಿತ್ರರಂಗಕ್ಕೆ ಹಿರಿಯಣ್ಣನಂತಿದ್ದರು.
Key words: Actor, Rebel Star Ambareesh, Karnataka Ratna, Appeal