Thursday, August 13, 2026

BDA Apartments

Home Front Page ಸಚಿವ ಸಂಪುಟದಲ್ಲಿ ದಲಿತರಿಗೆ ಸ್ಥಾನ ನೀಡಲು ಮೈಸೂರಿನ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

ಸಚಿವ ಸಂಪುಟದಲ್ಲಿ ದಲಿತರಿಗೆ ಸ್ಥಾನ ನೀಡಲು ಮೈಸೂರಿನ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

ಮೈಸೂರು, ಆಗಸ್ಟ್ 18, 2019 (www.justkannada.in): ಬಿಎಸ್ವೈ ಸಂಪುಟದಲ್ಲಿ ದಲಿತರಿಗೆ ಸ್ಥಾನ ಕಲ್ಪಿಸಲು ಮೈಸೂರಿನ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ದಲಿತ ಸಮುದಾಯದ ನಾಯಕರಿಗೆ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟೀಯ ಅಧ್ಯಕ್ಷ ಅಮಿತ್ ಶಾ ಗೆ ಅವರಿಗೆ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ರಮೇಶ್ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿರಿಯ ಅನುಭವಿ ರಾಜಕಾರಣಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಕೇಂದ್ರ ಸಂಪುಟದಲ್ಲೂ ಸ್ಥಾನ ನೀಡದೆ ಬಿಜೆಪಿ ನಿರಾಸೆ ಮಾಡಿದೆ. ಈ ಹಿನ್ನೆಲೆ ಯಡಿಯೂರಪ್ಪ ಸಂಪುಟದಲ್ಲಿ ದಲಿತ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಈ ಬಾರಿಯಾದರೂ 6 ಬಾರಿ ವಿಧಾನಸಭೆ ಪ್ರವೇಶಿಸಿರುವ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಅಂಗಾರ ಎಸ್, ಅವರಿಗೆ ಸಚಿವ ಸ್ಥಾನ ನೀಡಿ ಪಕ್ಷೇತರ ಶಾಸಕ ನಾಗೇಶ್ ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. 2008 ರಲ್ಲಿ ಬಿಎಸ್ವೈ ಮುಖ್ಯ ಮಂತ್ರಿ ಆಗಿದ್ದಾಗ ದಲಿತ ಸಮುದಾಯಕ್ಕೆ ಪ್ರಧಾನ್ಯತೆ ನೀಡಿರಲಿಲ್ಲ. ಈಗಲಾದರೂ ದಲಿತ ಸಮುದಾಯಕ್ಕೆ ಅವಕಾಶ ಕಲ್ಪಿಸಲಿ ಎಂದು ಸಂಘದ ಸದಸ್ಯರು ಆಗ್ರಹಿಸಿದರು.